ಸಂಕ್ಷಿಪ್ತ ಸುದ್ದಿ:
ಅಥಣಿ: ಕೋವಿಡ್ 19 ಸಂಬಂಧಪಟ್ಟಂತೆ ಅಥಣಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಎಸ್. ಸವದಿ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳು, ಡಿವೈಎಸ್ಪಿ, ತಹಸಿಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.