ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಇಂದು ಆಚರಿಸಲಾಗುತ್ತದೆ. ನವದೆಹಲಿಯಲ್ಲಿ ಮತ್ತು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸೇರಿದಂತೆ ದೇಶಾದ್ಯಂತ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು ಸಂಜೆ 5 ಗಂಟೆಗೆ ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ 66ನೇ ಪರಿನಿರ್ವಾಣ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಡಾ.ಬಿ.ಆರ್. ಅಂಬೇಡ್ಕರ್ ರವರ 9 ಅಡಿ ಎತ್ತರದ ಬೃಹತ್ ಪ್ರತಿಮೆ ಅನಾವರಣ ಮಾಡಲಾಗುವುದು.