ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಶಿಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಮಕ್ಕಳು ಮತ್ತು ಯುವಕರಲ್ಲಿ ಶಿಕ್ಷಣದ ಸಂಭ್ರಮವನ್ನು ಪಸರಿಸುವ ದಿಸೆಯಲ್ಲಿ ಶಿಕ್ಷಕರು ಕಠಿಣ ಪರಿಶ್ರಮ ಪಡುತ್ತಿದ್ದಾರೆ ಎಂದು ತಿಳಿಸಿರುವ ಪ್ರಧಾನಿ, ಟ್ವೀಟ್ ಸಂದೇಶದಲ್ಲಿ ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಮಾಜಿ ರಾಷ್ಟ್ರಪತಿ , ಶಿಕ್ಷಣ ತಜ್ಞ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶೈಕ್ಷಣಿಕ ಕ್ಷೇತ್ರದ ಉನ್ನತಿಗೆ ಗಣನೀಯವಾದ ಸೇವೆ ಸಲ್ಲಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಎಲ್ಲ ಶಿಕ್ಷಕ ವೃಂದಕ್ಕೆ ಶುಭಾಶಯ ಸಲ್ಲಿಸುವುದಾಗಿ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂಡ ಶುಭಾಶಯ ಕೋರಿದ್ದಾರೆ.
