ರಕ್ಷಣಾ ಸಚಿವಾಲಯ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಇದೇ 15ರಿಂದ 17ರ ವರೆಗೆ ಮೂರು ದಿನಗಳ ಕಾಲ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ “ಭಾರತ ಉತ್ಪಾದನಾ ಪ್ರದರ್ಶನ – 2022” ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ವಲಯ ಉದ್ಯಮದ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸಣ್ಣ ಕೈಗಾರಿಕಾ ಉದ್ಯಮಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಲಿದ್ದು, ಕೈಗಾರಿಕೋದ್ಯಮಿಗಳು ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಲಘು ಕೈಗಾರಿಕಾ ಪ್ರದೇಶಗಳಾದ ಪೀಣ್ಯ, ದಾಬಸ್‌ಪೇಟೆ, ನೆಲಮಂಗಲ ಭಾಗದ ಕೈಗಾರಿಕೆಗಳಿಗೆ ಈ ಕಾರ್ಯಕ್ರಮದಿಂದ ಹೆಚ್ಚಿನ ಅನುಕೂಲವಾಗಲಿದೆ.
_CLICK to Follow us on DailyHunt