Wednesday, February 19, 2025
HomeUncategorizedಈಗಿನ ಪ್ರಮುಖಾಂಶಗಳು !

ಈಗಿನ ಪ್ರಮುಖಾಂಶಗಳು !

  • ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಜನ್ಮದಿನ. ಉಪರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿದ್ದಾರೆ. ‘ಸಮಾಜದ ಬಡವರು ಮತ್ತು ಕೆಳ ವರ್ಗಗಳನ್ನು ಸಬಲೀಕರಣಗೊಳಿಸುವಲ್ಲಿ ಅವರ ಪ್ರಯತ್ನ ಅನುಕರಣೀಯವಾದದು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲಿ‘. – ಪ್ರಧಾನಿ ನರೇಂದ್ರ ಮೋದಿ.
  • ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರಿಗೆ ಜನ್ಮ ದಿನದ ಶುಭಾಶಯಗಳು. ನಿಮ್ಮ ಉತ್ತಮ ಆರೋಗ್ಯ ಮತ್ತು ಸಂತೋಷ ಹೀಗೆ ಚಿರಕಾಲ ಉಳಿಯಲಿ ಎಂದು ಪ್ರಾರ್ಥಿಸುತ್ತೇನೆ” _ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
  • ಬೆಂಗಳೂರು:  ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಪ್ರಧಾನಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
  • ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆ; ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ 14567 ಲೋಕಾರ್ಪಣೆ
  • ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ಸಂಬಂಧಿಸಿದ ದಾಖಲೆಗಳಾದ ಫಿಟ್‌ ನೆಸ್‌, ಪರವಾನಗಿ, ನೋಂದಣಿ ಹಾಗೂ ಇತರೇ ದಾಖಲೆಗಳ ಅವಧಿಯನ್ನು ಕೇಂದ್ರ ಸರ್ಕಾರ ಅಕ್ಟೋಬರ್ 31ರವರೆಗೆ ವಿಸ್ತರಿಸಿದೆ.
  • ಕೇಂದ್ರ ಸಚಿವ ಅನುರಾಗ್ ಠಾಕೂರ್ ಇಂದು ಪ್ರಯಾಗರಾಜದಲ್ಲಿರುವ ಚಂದ್ರ ಶೇಖರ್ ಆಜಾದ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news