- ವೃತ್ತಿ ಪರ ಕೋರ್ಸ್‌ಗಳ ಪ್ರವೇಶದ ದಾಖಲಾತಿ ಪರಿಶೀಲನೆ ಕಾರ್ಯ ಆರಂಭವಾಗಿದೆ. ಸೆಪ್ಟೆಂಬರ್ 7 ರವರೆಗೆ ನಿರಂತರವಾಗಿ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಆಗಸ್ಟ್ 30 ಮತ್ತು 31 ರಂದು ಸಾರ್ವಜನಿಕ ರಜೆ ಇರುವುದರಿಂದ ದಾಖಲಾತಿ ಪರಿಶೀಲನೆ ಇರುವುದಿಲ್ಲ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
- ಆಸ್ಪತ್ರೆಗಳಲ್ಲಿ ಡಿಜಿಟಲೀಕರಣವನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ -ಎನ್ಎಚ್ಎ ಆಸ್ಪತ್ರೆಗಳು, ಕ್ಲಿನಿಕ್ ಗಳು ಮತ್ತು ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಂತಹ ಆರೋಗ್ಯ ಸಂಸ್ಥೆಗಳಿಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಹಾರ್ಡ್ ವೇರ್ ಮಾರ್ಗಸೂಚಿಗಳನ್ನು ಹೊರಡಿಸಿದೆ.
- ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಮತ್ತೆ ಮೂರು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- ರಾಜ್ಯದಲ್ಲಿ ಕೆಲವು ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ, ಮತ್ತೆ ಆರಂಭವಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- 2022-23ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ರಾಜ್ಯ ಮಟ್ಟದಲ್ಲಿ ಆಯೋಜಿಸಲು ಸರಕಾರ ಕ್ರಮ ಕೈಗೊಂಡಿದೆ. ತರಬೇತಿ ಶಿಬಿರದಲ್ಲಿ ಪಾಲ್ಗೂಳ್ಳಲು ಇಚ್ಛೆ ಇರುವ ಗದಗ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾನಪದ ಕಲಾತಂಡಗಳು 2022ರ ಸೆಪ್ಟೆಂಬರ್ 1 ರಂದು ಸಂಜೆ 4 ಗಂಟೆಯೊಳಗಾಗಿ ಗದಗ ನಗರದ ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕಾರ್ಯಾಲಯಕ್ಕೆ ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ಪದ್ಮ ಸರಣಿಯ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಪ್ರಶಸ್ತಿಗಳಿಗೆ ಆನ್‌ಲೈನ್ ಮೂಲಕ ನಾಮನಿರ್ದೇಶನ ಮಾಡಲು ಮೇ 1 ರಿಂದ ಕಾಲಾವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ನಾಮನಿರ್ದೇಶನಗಳನ್ನು ಅಪ್‌ಲೋಡ್ ಮಾಡಬಹುದಾಗಿದೆ.
- ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ಇಂದಿಗೆ 15 ವರ್ಷಗಳು ಪೂರ್ಣಗೊಂಡು 16 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ. 2007 ಆಗಸ್ಟ್ 23 ರಂದು ಅವಿಭಜಿತ ಕೋಲಾರ ಜಿಲ್ಲೆಯಿಂದ ಪ್ರತ್ಯೇಕಗೊಂಡು ರಾಜ್ಯದ 29ನೇ ಸ್ವತಂತ್ರ ಜಿಲ್ಲೆಯಾಗಿ ರಚನೆಯಾಗಿತ್ತು.

- ಕಳೆದ 20 ದಿನಗಳಿಂದ ಬೆಳಗಾವಿಜಿಲ್ಲೆಯ ನಾಲ್ಕು ಕಡೆ ಚಿರೆತೆಗಳ ಹಾವಳಿ ಹೆಚ್ಚಾಗಿದೆ. ಬೆಳಗಾವಿ ಗಾಲ್ಪ್ ಮೈದಾನ ಬಳಿ ಚಿರತೆ ಸ್ಥಳೀಯರಿಗೆ ಕಾಣಿಸಿತ್ತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಿಂದ ಎರಡು ಆನೆಗಳನ್ನು ತರೆಸಿ ಇಂದಿನಿಂದ ಚಿರತೆ ಸೆರೆ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ತಿಳಿಸಿದರು.
- ಪ್ರಧಾನಮಂತ್ರಿ ನರೇಂದ್ರಮೋದಿ ನಾಳೆ ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದು, ಎರಡು ಪ್ರಮುಖ ಆರೋಗ್ಯ ಉಪಕ್ರಮಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ.
- ಮತದಾರರ ಪಟ್ಟಿಯ ಜೊತೆ ಆಧಾರ್ ಜೋಡಿಸುವ ಕುರಿತಾದ ನಮೂನೆ 6ಬಿ ಅಡಿಯಲ್ಲಿ ಆಧಾರ್ ಸಲ್ಲಿಕೆ ಮಾಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಚುನಾವಣಾ ಆಯೋಗ ಪುನರುಚ್ಚರಿಸಿದೆ.
- ರಾಜ್ಯದಲ್ಲಿರುವ ಕೈಗಾರಿಕೆಗಳು ಉದ್ಯೋಗ ನೀಡುವಾಗ ಕನ್ನಡಿಗ ಪ್ರತಿಭಾವಂತ ಯುವಜನರನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ ತಿಳಿಸಿದ್ದಾರೆ.
- ಗುಣಾತ್ಮಕ ಹಾಲು ಉತ್ಪಾದನೆಗೆ ಪೂರಕವಾಗುವಂತೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಪಶು ಆಹಾರ ತಯಾರಿಕಾ ಘಟಕ ಆರಂಭಿಸಲಾಗುವುದು. ಹಸುಗಳು ಗುಣಾತ್ಮಕ ಹಾಲು ನೀಡಬೇಕಾದರೆ ಅದಕ್ಕೆ ಪೋಷಕಾಂಶಯುಕ್ತ ಆಹಾರ ನೀಡುವುದು ಮುಖ್ಯವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಮೈಸೂರಿನಲ್ಲಿ ತಿಳಿಸಿದ್ದಾರೆ.
- ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಭಾರತ ಮೂರನೇ ಹಾಗೂ ಅಂತಿಮ ಪಂದ್ಯದಲ್ಲೂ ಜಯಗಳಿಸಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಗಳಿಸಿದ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ ಜಯ ದಕ್ಕಿಸಿಕೊಂಡಿತು. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 3-0 ಅಂತರದೊಂದಿಗೆ ಭಾರತ ತನ್ನದಾಗಿಸಿಕೊಂಡಿದೆ.
_Follow & Support us on DailyHunt