- ಭಾರತೀಯ ಹವಾಮಾನ ಇಲಾಖೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯು ಮುಂದುವರೆಯಲಿದೆ.
- ದೇಶದಲ್ಲಿ ಇಲ್ಲಿಯವರೆಗೆ ಕೊರೋನ ಲಸಿಕೆ ಪಡೆದವರ ಸಂಖ್ಯೆ 61,22,08,542. ಕಳೆದ 24 ಗಂಟೆಯಲ್ಲಿ ಲಸಿಕೆ ಪಡೆದವರ ಸಂಖ್ಯೆ 79, 48,439 ಜನ.
- ಫಿಟ್ ಇಂಡಿಯಾ ಅಭಿಯಾನದ 2ನೇ ವಾರ್ಷಿಕೋತ್ಸವ ಆಚರಣೆ ಮತ್ತು ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಇದೇ 29ರಂದು ಫಿಟ್ ಇಂಡಿಯಾ ಮೊಬೈಲ್ ಆ್ಯಪ್ ಗೆ ಚಾಲನೆ ನೀಡಲಿದ್ದಾರೆ.
- ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲಖನೌದಲ್ಲಿಂದು ಕ್ಯಾಪ್ಟನ್ ಮನೋಜ್ ಕುಮಾರ್ ಪಾಂಡೆ ಸೈನಿಕ ಶಾಲೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು: ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ವಿಜಯಪುರ ವಯಾ ತುಮಕೂರು, ಚಿತ್ರದುರ್ಗ, ಕೂಡ್ಲಿಗಿ, ಹೊಸಪೇಟೆ, ಇಳಕಲ್ ಮಾರ್ಗದಲ್ಲಿ ಎಸಿ ಸ್ಲೀಪರ್ ಸಾರಿಗೆಯನ್ನು ದಿನಾಂಕ 27-08-2021 ರಿಂದ ಜಾರಿಗೆ ಬರುವಂತೆ ವೇಳಾಪಟ್ಟಿಯಂತೆ ಪ್ರಾರಂಭಿಸಿ, ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ಪ್ರಕಟಣೆಯು ತಿಳಿಸಿದೆ.
- ಬೆಂಗಳೂರು: ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ‘ ಸೌತ್ ಜ್ಯುವೆಲ್ಲರಿ ಷೋ’ ವನ್ನು ಸಿ ಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಟಿ.ಎ.ಶರವಣ, ಗ್ಲೋಬಲ್ ಎಕ್ಸಿಬಿಷನ್ ಅಂಡ್ ಸರ್ವಿಸಸ್ ನ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.
- ರಾಯಚೂರು: ತಾಲೂಕಿನ ಸಗಂಕುಂಟಾ ಗ್ರಾಮದಲ್ಲಿ ERSS-112 ಕರ್ತವ್ಯ ನಿರತ ಅಧಿಕಾರಿಗಳು “ತುರ್ತು ಸ್ಪಂದನ ಸೇವಾ ವ್ಯವಸ್ಥೆ-112” ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, ಯಾವುದೇ ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112ಗೆ ಕರೆ ಮಾಡಿ ಎಂದು ತಿಳಿಸಿದರು.
- ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದ ಜೋಗಿನ ರಾಮಣ್ಣ ಕಾಲೇಜಿನಲ್ಲಿ ERSS-112 ಕರ್ತವ್ಯ ನಿರತ ಅಧಿಕಾರಿಗಳು “ತುರ್ತು ಸ್ಪಂದನ ಸೇವಾ ವ್ಯವಸ್ಥೆ-112” ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅರಿವು ಮೂಡಿಸಿ, ಯಾವುದೇ ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112ಗೆ ಕರೆ ಮಾಡಿ ಎಂದು ತಿಳಿಸಿದರು.
- ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ ನಡೆಸಿದರು .
- ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಹಾಗೂ ಮಕ್ಕಳ ತೀವ್ರ ನಿಗಾ ಘಟಕವನ್ನು ಸಿ ಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು ಮತ್ತು ಶ್ರೀ ಸತ್ಯಸಾಯಿ ಸ್ಮಾರಕ ಆಸ್ಪತ್ರೆಯ ಶ್ರೀಸತ್ಯಸಾಯಿ ರಾಜೇಶ್ವರಿ ಸ್ಮಾರಕ ಕಟ್ಟಡಕ್ಕೆ ಭೂಮಿ ಪೂಜೆಯನ್ನು ಸಿ ಎಂ ನೆರವೇರಿಸಿದರು.
- ಬಳ್ಳಾರಿ: ಸಾರಿಗೆ ಮತ್ತು ಎಸ್ಟಿ ವೆಲ್ಪೇರ್ ಸಚಿವರಾದ ಶ್ರೀರಾಮುಲು ಅವರು ಗೃಹ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ, ಅಹವಾಲುಗಳನ್ನು ಆಲಿಸಿ, ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದರು.
- ಬೆಂಗಳೂರು: “ಇಸ್ಕಾನ್ ದೇವಸ್ಥಾನ ಬೆಂಗಳೂರು ಆಗಸ್ಟ್ 29 ಮತ್ತು 30 ರಂದು ಜನ್ಮಾಷ್ಟಮಿಯನ್ನು ಆಚರಿಸಲು ಭಕ್ತರು ಆನ್‌ಲೈನ್‌ನಲ್ಲಿ ಭಾಗವಹಿಸಬಹುದು.” ನವೀನ್ ನೀರದ ದಾಸ, ಇಸ್ಕಾನ್ ಬೆಂಗಳೂರು ಕಾರ್ಯತಂತ್ರದ ಸಂವಹನ ಮುಖ್ಯಸ್ಥರು.
