- ರಾಜ್ಯಾದ್ಯಂತ ಮುಂದಿನ 4 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
- ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಸೆಂಟರ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಇದೇ ಸೆಪ್ಟೆಂಬರ್ 12ರ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದಾರೆ.
- “ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕರನ್ನು ನಾನು ಅಭಿನಂದಿಸುತ್ತೇನೆ. ನೀವು ಕಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದೀರಿ. ನಿಮ್ಮ ಪ್ರಯತ್ನಗಳು ಶ್ಲಾಘನೀಯ”- ಶಿಕ್ಷಕರ ಉತ್ಸವದ ಉದ್ಘಾಟನಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ
- ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ ಠಾಕೂರ್ ಬಾಂಗ್ಲಾದೇಶದ ವಾರ್ತಾ ಮತ್ತು ಪ್ರಸಾರ ಸಚಿವರಾದ ಹಸನ್ ಮಹ್ಮದ್ ಅವರನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿ ಮಾಡಿದರು.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದರು.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ 2 ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಅವರು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಲಿದ್ದಾರೆ.
- ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸವೇಕು. ಈ ಮೂಲಕ ಅಕ್ರಮ, ದೇಶದ್ರೋಹ, ಸಮಾಜ ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
- ಭಾರತ 2021ರ ಬ್ರಿಕ್ಸ್ ದೇಶಗಳ ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 9 ರಂದು 13ನೇ ಬ್ರಿಕ್ಸ್ ದೇಶಗಳ ವರ್ಚುಯಲ್ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳಲಿದ್ದಾರೆ.
- ಮುಂಬೈ: ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆಯ ಅಂಗವಾಗಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಿನ್ನೆ ಮುಂಬೈನ ಧಾರಾವಿಯಲ್ಲಿ ಗರ್ಭಿಣಿಯರು ಮತ್ತು ತಾಯಂದಿರೊಂದಿಗೆ ಸಂವಾದ ನಡೆಸಿದರು. ಗರ್ಭಿಣಿಯರು ಮತ್ತು ಬಾಣಂತಿಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತುಕತೆ ನಡೆಸಿದರು. ಶಿಶು ಅಭಿವೃದ್ಧಿ ಸೇವಾ ಯೋಜನೆಯ ಫಲಾನುಭವಿಗಳಿಗೆ ಫಲ ವಿತರಣೆ ಮಾಡಿದರು. ಬಳಿಕ, ಧಾರಾವಿಯ ಅಂಗನವಾಡಿ ಕಾರ್ಯಕರ್ತರೊಂದಿಗೂ ಮಾತುಕತೆ ನಡೆಸಿದ ಸಚಿವೆ, ಕೋವಿಡ್ ಸಂಕಷ್ಟದ ಸಮಯದಲ್ಲಿ ಅವರು ನಿರ್ವಹಿಸಿದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
- ರಾಯಚೂರು: ಜಿಲ್ಲೆಯ ಲಿಂಗಸಗೂರು ಪಟ್ಟಣದ ERSS-112 ಕರ್ತವ್ಯ ನಿರತ ಅಧಿಕಾರಿಗಳು, ಮೌಲಾನ ಅಜಾದ್ ಶಾಲೆಯಲ್ಲಿ ಮಕ್ಕಳಿಗೆ ಮತ್ತು ಶಿಕ್ಷಕರಿಗೆ “ತುರ್ತು ಸ್ಪಂದನ ಸೇವಾ ವ್ಯವಸ್ಥೆ-112” ಬಗ್ಗೆಅರಿವು ಮೂಡಿಸಿ, ಯಾವುದೇ ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112ಗೆ ಕರೆ ಮಾಡಿ ಎಂದು ತಿಳಿಸಿದರು.
- “ಅನೇಕ ಅಪಘಾತಗಳು ಮತ್ತು ಸಾವುಗಳು ಹವಾಮಾನ ವೈಪರೀತ್ಯಗಳಿಂದನೂ ಸಹ ಉಂಟಾಗುತ್ತವೆ. ಹೊರಹೋಗುವ ಮೊದಲು ಹವಮಾನ ವೈಪರೀತ್ಯದ ಬಗ್ಗೆ ತಿಳಿದಿರಿ, ವಾಹನ ಚಾಲನೆ ಮಾಡುವುದು ಸುರಕ್ಷಿತವೇ ಎಂದು ಖಚಿತಪಡಿಸಿಕೊಳ್ಳಿ ಮತ್ತು ನಿಮ್ಮ ಕಾರನ್ನು ಪರೀಕ್ಷಿಸಿ. ಎಚ್ಚರಿಕೆಯಿಂದ ಚಾಲನೆ ಮಾಡಿ.”_KSRSA
