- ಸಿ ಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ, ಪಿ ಎಂ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರೊಡನೆ ಸಮಾಲೋಚನೆ.
- ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ನ 69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಅವರು, ಚೀನಾದ ತೈಪೆಯ, ನಿಯೆನ್ ಚಿನ್-ಚೆನ್ ಅವರನ್ನು 4-1 ಅಂತರದಿಂದ ಸೋಲಿಸಿ, ಸೆಮಿಫೈನಲ್ಸ್ ಪ್ರವೇಶಿಸುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.
- ಮೈಸೂರು: ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿಯಿಂದ ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿದೆ . ಇತ್ತೀಚೆಗೆ ಜನ್ಮಪಡೆದ ಗಂಡು ಜಿರಾಫೆ ಸೇರಿದಂತೆ, ಈವರಗೆ ಮೃಗಾಲಯದಲ್ಲಿ 22 ಜಿರಾಫೆಗಳು ಜನ್ಮ ತಾಳಿವೆ. ಪ್ರಾಣಿಗಳನ್ನು ವೀಕ್ಷಿಸಲು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
- ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿನ್ನೆ ವಿಶ್ವ ಹುಲಿ ದಿನ ಆಚರಿಸಲಾಯಿತು. ಈ ವೇಳೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನೂತನ ಲಾಂಛನವನ್ನು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ ಮೋಹನ್ ಬಿಡುಗಡೆ ಮಾಡಿದರು.
- “ಪ್ರಸ್ತುತ, ದೇಶದಲ್ಲಿ 34 ಮೆಟ್ರೋ ರೈಲು ಯೋಜನೆಗಳು ಪ್ರಗತಿಯಲ್ಲಿವೆ” _ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಾಲ್ ಕಿಶೋರ್.
- ಪ್ರಧಾನಿ ಟ್ವೀಟ್ : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡುವ ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿಶೇಷ ಮೀಸಲಾತಿ ಘೋಷಿಸಿದೆ. ಎಂಬಿಬಿಎಸ್, ಎಂಡಿ, ಎಂಎಸ್, ಡಿಪ್ಲೊಮಾ, ಬಿಡಿಎಸ್, ಎಂಡಿಎಸ್ ಕೋರ್ಸುಗಳಿಗೆ ಈ ಮೀಸಲಾತಿ ಲಭ್ಯವಾಗಲಿದೆ.
- “ಪ್ರಾಕೃತಿಕ ವಿಕೋಪಗಳ ಮೇಲೆ ನಿಗಾ ಇರಿಸಲು ಸಹಕರಿಸುವ ಜಿಯೋ ಇಮೇಜಿಂಗ್ ಉಪಗ್ರಹ ಇಒಎಸ್-3 ಅತಿ ಶೀಘ್ರದಲ್ಲಿ ಇಸ್ರೋ ಉಡಾವಣೆ ಮಾಡಲಿದೆ. ನದಿಗಳು, ಬೆಳೆ, ಅರಣ್ಯ ಹಾಗೂ ಮತ್ತಿತರ ಪ್ರದೇಶಗಳ ಮೇಲೆ ಈ ಉಪಗ್ರಹ ಅಧ್ಯಯನ ನಡೆಸಲಿದೆ”_ ಕೇಂದ್ರ ಸಚಿವ ಡಾ. ಜತೇಂದ್ರ ಸಿಂಗ್.
- ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ನೀರು ಹೊರಬಿಡಲಾಗಿದೆ. ಈ ಹಿನ್ನೆಲೆ ಬಾಗಲಕೋಟೆ, ವಿಜಯಪುರದಲ್ಲಿ ಹಲವು ಪ್ರದೇಶಗಳು ಜಲಾವೃತ.
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕಡಿಮೆ ಒತ್ತಡ ಇರುವ ಕಾರಣ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- “ಯಾವುದೇ ಬುಡಕಟ್ಟು ಜನಾಂಗದವರನ್ನು ಅವರ ಭೂ ಹಕ್ಕಿನ ಕುರಿತು ಇತ್ಯರ್ಥವಾಗದೇ ತೆರವುಗೊಳಿಸಬಾರದು” _ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಮಿಶ್ರಾ.
- ಟೋಕಿಯೋ ಒಲಂಪಿಕ್ಸ್: ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಇಂದು ಜಪಾನ್‌ನ ಅಕಾನೆ ಯಮುಗುಚಿ ವಿರುದ್ಧ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೆಣಸಲಿದ್ದಾರೆ.
- ಮತದಾರರ ಗುರುತು ಚೀಟಿಯೊಂದಿಗೆ ಆಧಾರ್ ಜೋಡಿಸುವ ಸಂಬಂಧ ಚುನಾವಣಾ ಆಯೋಗವು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ರಾಜ್ಯಸಭೆಗೆ ತಿಳಿಸಿದ್ದಾರೆ.
