ಉಡುಪಿ: ಜಿಲ್ಲೆಯ ಪ್ರವಾಸದಲ್ಲಿರುವ ಮಾನ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪಡುಬಿದ್ರೆ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ, ನೂತನ ಹೆಬ್ರಿ ತಾಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕಡಲ್ಕೊರೆತ ಹಾಗೂ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖೆ ಹಾಗೂ ಜಿಲ್ಲಾಆಡಳಿತಕ್ಕೆ ಸೂಚಿಸಿದರು,

ಅಲ್ಲದೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಸಿಯು ಸೌಲಭ್ಯ ವಿರುವಂತಹ 10 ಹಾಸಿಗೆಯ ನೂತನ ಕೋವಿಡ್-19 ಆಸ್ಪತ್ರೆಯ ಉದ್ಘಾಟನೆಯನ್ನು ಮಾನ್ಯ ಸಚಿವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸುನಿಲ್ ಕುಮಾರ ಕಾರ್ಕಳ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.