ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು.

ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ “ಡಯಾಲಿಸಿಸ್ ಘಟಕ” ವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.

ಹಾಗೂ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರವನ್ನೂ ಪರಿಶೀಲನೆ ಮಾಡಿದರು.


ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವರಾಮ್ ಹೆಬ್ಬಾರ್ ಶಾಸಕರಾದ ರೂಪಾಲಿ ನಾಯ್ಕ್, ಸುನಿಲ್ ನಾಯ್ಕ್, ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕು ಕಚೇರಿಯಿಂದ ಸಿ ಎಂ ಭಾಗವಹಿಸಿದರು.