ಸಧ್ಯದ ಸಂಕ್ಷಿಪ್ತ ಸುದ್ದಿ:
ಉತ್ತರ ಕನ್ನಡ: ಜಿಲ್ಲೆಯ ಶಿರಸಿ ನಗರದ ಪಂಡಿತ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಕೈಗೊಂಡ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ವೈದ್ಯರಿಂದ ಪ್ರಸ್ತುತ ಪರಿಸ್ಥಿತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಅಧಿಕಾರಿವರ್ಗದವರು ಮತ್ತು ಸಿಬ್ಬಂದಿ ಹಾಜರಿದ್ದರು.
