ಬೆಂಗಳೂರು: ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ಬೆಳಗ್ಗೆ ಮೌಂಟ್ ಕಾರ್ಮಲ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಳಿಕ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು , ಕಿರಣ್ ಮಜುಂದಾರ್ ಷಾ, ಅನುಪಮಾ ರಾವ್, ಅಶ್ವಿನಿ ನಾಚಪ್ಪ ಸೇರಿದಂತೆ ಹಲವಾರು ಸಾಧಕಿಯರು ಈ ಶಿಕ್ಷಣ ಸಂಸ್ಥೆಯ ಕೊಡುಗೆಯಾಗಿದ್ದಾರೆ. ರಾಜ್ಯದಲ್ಲಿ ಅತ್ತಿಮಬ್ಬೆ ಸೇರಿದಂತೆ ಹಲವರು ಶಿಕ್ಷಣ ಕ್ಷೇತ್ರಕ್ಕೆ ಅಡಿಪಾಯ ಹಾಕಿದ್ದರು. ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಒತ್ತು ನೀಡಲಾಗಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅವರು ಸಹ ಮಾತೃಭಾಷಾ ಶಿಕ್ಷಣಕ್ಕೆ ಒತ್ತು ನೀಡುವಂತೆ ಸಲಹೆ ಮಾಡಿದ್ದಾರೆ. ಮಾತೃಭಾಷೆಯಲ್ಲಿ ಕಲಿತ ಹಲವು ಮಂದಿ ಉತ್ತಮ ಸಾಧನೆ ಮಾಡಿದ್ದಾರೆ ಎಂದರು. ಯುವ ಸಮೂಹ ಉತ್ತಮ ಕನಸುಗಳ ಮೂಲಕ ಪರಿಶ್ರಮದೊಂದಿಗೆ ತಮ್ಮ ಸಾಧನೆಯನ್ನು ನನಸು ಮಾಡಿಕೊಳ್ಳಬೇಕಿದೆ. ಶಿಸ್ತು ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಲಿದೆ. ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಸಂರಕ್ಷಿಸುವ ಕೆಲಸವನ್ನು ಯುವ ಜನಾಂಗ ಮಾಡಬೇಕು. ಪರಿಸರವನ್ನು ಯಾವುದೇ ಕಾರಣಕ್ಕೂ ಅಲಕ್ಷ್ಯಿಸಬಾರದು . ಹಿರಿಯರನ್ನು ಗೌರವಿಸಿ, ಸೌಹಾರ್ದತೆಯಿಂದ ಬೆರೆತರೆ ಹೆಚ್ಚಿನ ಶಕ್ತಿ ದೊರೆಯಲಿದೆ . ಭಾರತ ಸಹಿಷ್ಣುತೆಗೆ ಹೆಸರಾಗಿದ್ದು, ಯಾವುದೇ ದೇಶದ ಮೇಲೆ ದಾಳಿ ಮಾಡಿದ ನಿದರ್ಶನಗಳಿಲ್ಲ. ಆದರ್ಶಕ್ಕೆ ನಮ್ಮ ದೇಶ ಹೆಸರಾಗಿದೆ, ಶಾಂತಿಯಿಂದ ಸಮೃದ್ಧತೆ ಸಾಧಿಸಲು ಸಾಧ್ಯ ಎಂದು ಉಪರಾಷ್ಟ್ರಪತಿ ಪ್ರತಿಪಾದಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಪ್ರಸ್ತುತ ಜಾಗತಿಕ ತಾಪಮಾನ , ಹವಾಮಾನ ಬದಲಾವಣೆಯಿಂದ ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಹಲವಾರು ಸಮಸ್ಯೆಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಾಗಿದೆ ಎಂದು ತಿಳಿಸಿದರು. ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಸಂಪರ್ಕಿಸುವ ಮೂಲಕ ನವಭಾರತ ಶ್ರೇಷ್ಠ ಭಾರತ ನಿರ್ಮಾಣ ಸಾಧ್ಯ. ನೂತನ ಶಿಕ್ಷಣ ನೀತಿ 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ಇದು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗುಜರಾತ್ ಮತ್ತು ರಾಜಸ್ತಾನದ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವ, ಆರ್ಚ್ ಡಯೋಸಿಸ್ ಮತ್ತಿತರರು ಉಪಸ್ಥಿತರಿದ್ದರು.
–ಸಂಕ್ಷಿಪ್ತ ಸುದ್ದಿಗಳ ಅಪ್ಡೇಟ್ಸ್ ಗಾಗಿ ನಮ್ಮನ್ನು ʼಶೆರ್ ಚಾಟ್ ʼ ನಲ್ಲಿ ಫಾಲೋಮಾಡಲು ಕ್ಲಿಕ್ಕಿಸಿ