- ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ 2023 ರ ಇದೇ 29 ರಂದು 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಗದಗ ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.
- ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
- ಸುಡಾನ್‌ನಿಂದ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಕಾವೇರಿ ನಡೆಯುತ್ತಿದೆ; 278 ಜನರನ್ನು ಭಾರತಕ್ಕೆ ಕರೆತರಲಾಗುತ್ತಿದೆ.
- ಬಿಜೆಪಿ-224, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 223, ಜೆಡಿಎಸ್-207, ಎಎಪಿ-209, ಬಿಎಸ್‌ಪಿ-133, ಸಿಪಿಐಎಂ-4, ಜೆಡಿಯು-8, ಎನ್‌ಪಿಪಿ-2, ನೋಂದಾಯಿತ ರಾಜಕೀಯ ಪಕ್ಷ-685 ಹಾಗೂ ಪಕ್ಷೇತರಾಗಿ-918 ಅಭ್ಯರ್ಥಿಗಳು ಸೇರಿದಂತೆ ಅಂತಿಮ ಕಣದಲ್ಲಿ 2613 ಅಭ್ಯರ್ಥಿಗಳಿದ್ದಾರೆ.
- ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿವೆ ಎಂದು ಆರೋಗ್ಯ ಸಚಿವಾಲಯ ವರದಿ ಮಾಡಿದೆ.
- ಇಂಡೋನೇಷಿಯಾದ ಸುಮಾತ್ರಾ ದ್ವೀಪದಲ್ಲಿಂದು ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 7.3 ರಷ್ಟಿತ್ತು.
- ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ -ಡಿಆರ್‌ಡಿಒ ಹಾಗೂ ಭಾರತೀಯ ನೌಕಾಪಡೆ ಜಂಟಿಯಾಗಿ ನಡೆಸಿದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ಪ್ರತಿಬಂಧಕದ ಪ್ರಾಯೋಗಿಕ ಪರೀಕ್ಷೆಯನ್ನು ನಿನ್ನೆ ಯಶಸ್ವಿಯಾಗಿ ನಡೆಸಿವೆ.
- ಕೊಚ್ಚಿಯಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ವಾಟರ್ ಮೆಟ್ರೋ ಸಾರಿಗೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
- ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲ 224 ಕ್ಷೇತ್ರಗಳಲ್ಲಿ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಚುನಾವಣಾಧಿಕಾರಿಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮಗಳು ಎಲ್ಲೆಡೆ ಮುಂದುವರೆದಿದೆ.

- ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಇಮ್ರಾನ್ ಹುಸೇನ್ ಇಂದು ವಿವಿಧೆಡೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ.
- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಚುನಾವಣಾ ಪ್ರಚಾರದ ನೇತೃತ್ವವನ್ನು ವಹಿಸಿಕೊಂಡಿದ್ದಾರೆ.
- ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಳೆ ರಾಜ್ಯಕ್ಕೆ ಭೇಟಿ ನಿಡಿ, ವಿವಿಧೆಡೆ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ.
- ಬಿಜೆಪಿ ಇಂದಿನಿಂದ ಎರಡು ದಿನಗಳ ಕಾಲ ವಿಶೇಷ ಮಹಾ ಪ್ರಚಾರ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದಾರೆ.