ಕಲಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಮ್. ಕಾರಜೋಳ, KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ,

ಸಂಸದರಾದ ಡಾ.ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕ ಬಿ.ಜಿ. ಪಾಟೀಲ್ ಸೇರಿದಂತೆ ಅನೇಕ ಗಣ್ಯ-ಮಾನ್ಯರು, ಆಧಿಕಾರಿವರ್ಗದವರು ಉಪಸ್ಥಿತರಿದ್ದರು.