ಸಂಕ್ಷಿಪ್ತ ಸುದ್ದಿ:
ಕಲ್ಬುರ್ಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸೇಡಂ ಕ್ಷೇತ್ರದ ಮಾನ್ಯ ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ಆಯ್ಕೆಯಾದರು.

ಅವರ ಪದಗ್ರಹಣ ಸಮಾರಂಭ ಇಂದು ಕಲ್ಬುರ್ಗಿಯ ಕೇಂದ್ರ ಕಚೇರಿಯಲ್ಲಿ ನಡೆಯಿತು, “ಶ್ರೀಯುತರ ಅಧ್ಯಕ್ಷತೆಯಲ್ಲಿ ಸಂಸ್ಥೆ ಉತ್ತಮ ಪ್ರಗತಿ ಕಾಣಲಿ” ಎಂದು ಮಾನ್ಯ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಭ ಕೋರಿದರು.ಈ ಸಂದರ್ಭದಲ್ಲಿ ಅನೇಕ ರಾಜಕೀಯ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮತ್ತು ಕಲಬುರ್ಗಿಯ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಸ್ವಯಂ ಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥಕ್ಕೆ ಮಾನ್ಯ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾನ್ಯ ಶಾಸಕರುಗಳಾದ ಶ್ರೀ ರಾಜಕುಮಾರ ಪಾಟೀಲ್ ತೇಲ್ಕೂರ, ಶ್ರೀ ರಾಜುಗೌಡ, ಶ್ರೀ ದತ್ತಾತ್ರೇಯ ಪಾಟೀಲ್ ರೇವೂರ್, ಹಲವಾರು ಗಣ್ಯರು, ಇಲಾಖಾ ಸಂಬಂಧಿತ ಹಿರಿಯ ಅಧಿಕಾರಿಗಳು, ಸಿಬ್ಬಂದಿಯವರು, ಮತ್ತಿತರರು ಉಪಸ್ಥಿತರಿದ್ದರು.