- ಚಿತ್ರರಂಗದ ಸರ್ವಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾಗಿರುವ ಆಸ್ಕರ್ ಪ್ರಶಸ್ತಿಗೆ ಭಾರತದ ಕಿರುಚಿತ್ರ The Elephant Whisperers ಗೆ ಕ್ಕೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಎರಡು ಆನೆಗಳ ಪಾಲನೆ ಹಾಗೂ ಭಾರತೀಯ ಅರಣ್ಯ ಸಂಪತ್ತಿನ ಕಥೆಯನ್ನು ಈ ಕಿರುಚಿತ್ರ ಒಳಗೊಂಡಿದೆ.
- ಎಸ್.ಎಸ್ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಗಳಿಸಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ಗೋಲ್ಡನ್ ಗ್ಲೋಬ್ ಹಾಗೂ ಕ್ರಿಟಿಕ್ ಚಾಯ್ಸ್ ಅವಾರ್ಡ್‌ಗೆ ಈ ಹಾಡು ಪಾತ್ರವಾಗಿತ್ತು. ಚಂದ್ರಬೋಸ್ ಬರೆದಿರುವ ಈ ಹಾಡಿಗೆ ಎಂ.ಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ.

- ಭಾರತದ ಚಿತ್ರಗಳಿಗೆ ಆಸ್ಕರ್ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರದ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಪ್ರಕೃತಿಯೊಂದಿಗಿನ ಸಾಮರಸ್ಯದ ಬದುಕಿನ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸಿರುವ ‘ದಿ ಎಲಿಫೆಂಟ್ ವಿಸ್ಪರರ್ಸ್’ ಹಾಗೂ ‘ನಾಟು ನಾಟು’ ಹಾಡು ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗಿದ್ದು, ಆಸ್ಕರ್ ಪ್ರಶಸ್ತಿ ಪಡೆದಿರುವ ಚಿತ್ರ ತಂಡದ ಎಲ್ಲರಿಗೂ ಅಭಿನಂದಿಸುವುದಾಗಿ ತಿಳಿಸಿದ್ದಾರೆ.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, RRR ಚಿತ್ರದ Naatu Naatu ಹಾಡು ಆಸ್ಕರ್ ಪ್ರಶಸ್ತಿ ಪಡೆದಿರುವುದು ಭಾರತೀಯರು ಹೆಮ್ಮೆಪಡುವಂತಾಗಿದ್ದು, ಚಿತ್ರ ತಂಡಕ್ಕೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ.
- ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಪ್ರಕೃತಿ ಮತ್ತು ಮಾನವನ ಸಾಮರಸ್ಯದ ಸಹಬಾಳ್ವೆಯ ಹೃದಯ ಸ್ಪರ್ಶಿ ಕಥೆಯನ್ನೊಳಗೊಂಡಿರುವ The Elephant Whisperers ಆಸ್ಕರ್ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ನಾಟು-ನಾಟು ಹಾಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದು, ಸಿನಿಮಾ ಕಲೆಯಿಂದ ಸಭಿಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ ಎಂದು ಟ್ವೀಟ್ ಸಂದೇಶದಲ್ಲಿ ಅಭಿನಂದಿಸಿದ್ದಾರೆ.
_Follow-Support us on twitter