ಕೆನಡಾ ಸಂಸದರಾದ , ತುಮಕೂರು ಜಿಲ್ಲೆಯ ಕನ್ನಡಿಗರಾದ ಚಂದ್ರ ಆರ್ಯ ಅವರು ಕೆನಡಾದ ಸಂಸತ್ ನಲ್ಲಿ “ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು” ಎನ್ನುವುದರೊಂದಿಗೆ ಕನ್ನಡದ ಕಂಪನ್ನು ಮೊಳಗಿಸಿದ್ದಾರೆ,
“ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ (ಮೊದಲ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ.ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ.ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು.” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.