ಕೇಂದ್ರ ಹಣಕಾಸು ಸಚಿವಾಲಯ:
ಕೇಂದ್ರ ಸರಕಾರವು ರಾಜ್ಯಗಳಿಗೆ ನೀಡಬೇಕಾಗಿದ್ದ ಸರಕು ಮತ್ತು ಸೇವಾ ತೆರಿಗೆ ಎಲ್ಲ ಬಾಕಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 31ರವರೆಗೆ ಬಾಕಿ ಮೊತ್ತವಾದ 86 ಸಾವಿರದ 912 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸರಕಾರ 25 ಸಾವಿರ ಕೋಟಿ ರೂಪಾಯಿ ಮಾತ್ರ ಜಿಎಸ್‌ಟಿ ಬಾಕಿ ಮೊತ್ತ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಸೆಸ್ ರೂಪದಲ್ಲಿ ಸಂಗ್ರಹವಾದ ಮೊತ್ತವನ್ನು ಕೇಂದ್ರ ಸರಕಾರ ಜಿಎಸ್‌ಟಿ ಪರಿಹಾರವಾಗಿ ಎಲ್ಲ ರಾಜ್ಯಗಳಿಗೆ ಹಂಚಿಕೆ ಮಾಡಿದ್ದು, ಇದಕ್ಕೆ ರಾಜ್ಯ ಸರ್ಕಾರಗಳು ಸಮ್ಮತಿ ಸೂಚಿಸಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
