- ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿಂದು ಭಾರತ – ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಮಧ್ಯೆ 3 ಪಂದ್ಯಗಳ ಏಕದಿನ ಸರಣಿಯ ಪ್ರಥಮ ಏಕದಿನ ಸರಣಿಯಿಂದ ಶ್ರೇಯಸ್ ಐಯ್ಯರ್ ಹೊರ ಬಿದ್ದಿದ್ದಾರೆ.
- ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಪ್ರಕಟಿಸಲಿದೆ.
- ತೆಲಂಗಾಣ | ಸಿಎಂ ಕೆಸಿಆರ್ ಇಂದು ಖಮ್ಮಂನಲ್ಲಿ ಬಿಆರ್‌ಎಸ್ ಪಕ್ಷದ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇರಳ ಸಿಎಂ ಪಿಣರಾಯಿ ವಿಜಯನ್, ಪಂಜಾಬ್ ಸಿಎಂ ಭಗವಂತ್ ಮಾನ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಸಿಪಿಐ ಜನರಲ್ ಸೆಸಿ ಡಿ ರಾಜಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
- ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಇಂದಿನಿಂದ ಮೂರು ದಿನಗಳ ಕಾಲ ಮಾಲ್ಡೀವ್ಸ್ ಹಾಗೂ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ.
- ಹೈದರಾಬಾದ್ ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿಂದು ಭಾರತ – ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ.

- ವಿಯಟ್ನಾಂನಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟ ತೀವ್ರಗೊಂಡಿದ್ದು, ಅಲ್ಲಿನ ಅಧ್ಯಕ್ಷ ನ್ಗುಯೆನ್ ಕ್ಸುವಾನ್ ಪುಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
- ವಿದೇಶಾಂಗ ವ್ಯವಹಾರಗಳು ಹಾಗೂ ಸಂಸ್ಕೃತಿ ಖಾತೆ ರಾಜ್ಯ ಸಚಿವರಾದ ಮೀನಾಕ್ಷಿ ಲೇಖಿ ಅವರು ತಮ್ಮ 8 ದಿವಸಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
- ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದುನ್ನು ಕಡ್ಡಾಯಗೊಳಿಸಲಾಗಿದೆ.
- ಮೀನುಗಾರಿಕೆ ಇಲಾಖೆ, ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಸಾಗರ್ ಪರಿಕ್ರಮ’ ಯೋಜನೆಯನ್ನು ಜಾರಿಗೊಳಿಸಿದೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕದಲ್ಲಿ 10 ಸಾವಿರದ ೮೦೦ ಕೋಟಿ ರೂಪಾಯಿಗೂ ಹೆಚ್ಚು ಮತ್ತು ಮಹಾರಾಷ್ಟ್ರದಲ್ಲಿ 38 ಸಾವಿರದ 800 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.
_CLICK to Follow-Support us on Dailyhunt