ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.

ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕುರಿತಾಗಿ ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಯಿತು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಶಾಸಕ ಎಸ್ ಆರ್ ವಿಶ್ವನಾಥ್, ಮುಖ್ಯ ಕಾರ್ಯದರ್ಶಿಗಳು ಟಿ ಎಂ ವಿಜಯಭಾಸ್ಕರ್, ಬಿಬಿಎಂಪಿ ಆಯುಕ್ತ ಬಿ ಹೆಚ್ ಅನಿಲ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.