ಕೋವಿಡ್-19 ಸಾಂಕ್ರಾಮಿಕದ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರ ನೌಕರರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಈ ಕುರಿತು ಇಂದು ಆದೇಶ ಹೊರಡಿಸಿದೆ. ಆಗಾಗ್ಗೆ ಕೈ ತೊಳೆಯುವುದು, ಮುಖಗವಸು ಅಥವಾ ಮುಖದ ಹೊದಿಕೆಯನ್ನು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವ ಮೂಲಕ ಲಸಿಕೆ ಹಾಕಿಸಿಕೊಂಡ ನಂತರವೂ ಕೋವಿಡ್ ಸೂಕ್ತವಾದ ನಡವಳಿಕೆಯನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.
ಸರ್ಕಾರವು ಪರಿಸ್ಥಿತಿಯನ್ನು ಬಹಳ ನಿಕಟವಾಗಿ ಗಮನಿಸುತ್ತಿದೆ ಮತ್ತು ಕೋವಿಡ್-19 ಸಾಂಕ್ರಾಮಿಕ ಹರಡುವಿಕೆಯನ್ನು ನಿಯಂತ್ರಿಸಲು ಆದ್ಯತೆಯ ಗುಂಪುಗಳಿಗೆ ಲಸಿಕೆನೀಡುವ ತಂತ್ರದ ಆಧಾರದ ಮೇಲೆ, ಸದ್ಯ 45 ವರ್ಷ ಮತ್ತು ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ.
ಕೋವಿಡ್-19 ನಿಯಂತ್ರಣ ಕ್ರಮಗಳ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಕಾಲಕಾಲಕ್ಕೆ ಸೂಚನೆಗಳನ್ನು ನೀಡುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
(ಮಾಹಿತಿ ಕೃಪೆ: ಪಿಐಬಿ)