ನರಸಿಂಹರಾಜಪುರ:

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಹಾಯಕ ಕೃಷಿ ನಿರ್ದೇಶಕರ ಕಟ್ಟಡವನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಹಾಗು ಪ್ರವಾಸೋದ್ಯಮ ಸಚಿವರಾದ ಸಿ.ಟಿ.ಅವರು ಉದ್ಘಾಟಿಸಿದರು. ಈ ವೇಳೆ ಮಾಜಿ ಸಚಿವರಾದ ಡಿ ಎನ್ ಜೀವರಾಜ್, ಎಂ.ಎಲ್.ಸಿ ಪ್ರಾಣೇಶ್, ಶಾಸಕರಾದ ಟಿ.ಡಿ ರಾಜೇಗೌಡರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸುಜಾತ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬಾಳೆಹೊನ್ನೂರು:

51 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿಯ ಶಿಲಾನ್ಯಾಸವನ್ನು ಕಾರ್ಯಕ್ರಮವನ್ನು ಶ್ರೀ ರಂಭಾಪುರಿ ಜಗದ್ಗುರುಗಳ ದಿವ್ಯಸಾನಿಧ್ಯದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಸಿ.ಟಿ. ರವಿ ಹಾಗು ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ, ಶೃಂಗೇರಿ ಶಾಸಕರಾದ ಶ್ರೀ ಟಿ ಡಿ ರಾಜೇಗೌಡರು, ಮಾಜಿ ಸಚಿವರಾದ ಶ್ರೀ ಡಿ ಎನ್ ಜೀವರಾಜ್, ಎಂ.ಎಲ್ .ಸಿ ಶ್ರೀ ಪ್ರಾಣೇಶ್ , ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸುಜಾತ ಕೃಷ್ಣಪ್ಪ ಹಾಗು ಇತರರು ಉಪಸ್ಥಿತರಿದ್ದರು. ಮತ್ತು

ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ಶ್ರೀವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ವಾರ್ತಾ ಸಂಕಲನ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಸಿ.ಟಿ. ರವಿ ಸೇರಿದಂತೆ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ, ಶಾಸಕರಾದ ಟಿ ಡಿ ರಾಜೇಗೌಡರು, ಮಾಜಿ ಸಚಿವರಾದ ಶ್ರೀ ಡಿ ಎನ್ ಜೀವರಾಜ್ ಎಂ.ಎಲ್ .ಸಿ ಶ್ರೀ ಪ್ರಾಣೇಶ್, ಜಿ.ಪಂ ಅಧ್ಯಕ್ಷರಾದ ಶ್ರೀಮತಿ ಸುಜಾತ ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು.


