ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಆರೋಗ್ಯ ಸಚಿವರಾದ ಬಿ.ಶ್ರೀರಾಮುಲು ನೇತೃತ್ವದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ 20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

ಸಭೆಯಲ್ಲಿ ಮಾನ್ಯ ಸಂಸದರಾದ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಸಿಇಒ ಯೋಗೇಶ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.