ನ್ಯೂಸ್ ಲೈನ್ !
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಕುಲ್ಗಾಂನಲ್ಲಿ ಭದ್ರತಾ ಪಡೆಗಳಿಗೆ ಪ್ರಮುಖ ಯಶಸ್ಸು. ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆಗೈದಿವೆ. ಹತ್ಯೆಗೀಡಾದ ಭಯೋತ್ಪಾದಕರು ಜೈಷ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದಾರೆ. ಇವರಲ್ಲಿ ಇಬ್ಬರು ಪಾಕಿಸ್ತಾನಿ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರು. ಉಳಿದ ಇಬ್ಬರ ಪತ್ತೆ ಕಾರ್ಯ ಹಾಗೂ ಶೋಧ ಕಾರ್ಯ ಮುಂದುವರೆದಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.