- ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಸಿಎಂ ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
- ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ಸರ್ಕಾರದ ನಿರ್ಧಾರ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಿದೆ.
- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾ ಪಟ್ಟಿಯಂತೆ ವೃತ್ತಿಪರ ಕೋಸ್‌ಗಳಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಂದಿನಿಂದ ಅಕ್ಟೋಬರ್ 13ರವರೆಗೆ ಆಫ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
- ಹಿರಿಯ ಬಹುಭಾಷಾ ನಟ ಅನಂತ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದಿಂದ ಇಂದು ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪದವಿ ಪ್ರದಾನ ಮಾಡಿದರು.
- ವಿಶ್ವ ಬಾಹ್ಯಾಕಾಶ ಸಪ್ತಾಹದ ಅಂಗವಾಗಿ ಬೆಂಗಳೂರಿನ ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಇಂದು ಹೈಬ್ರಿಡ್ ಮಾದರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ಬಾಹ್ಯಾಕಾಶ ವಿಜ್ಞಾನಿಗಳ ಜೊತೆ ಸಂವಾದ ಏರ್ಪಡಿಸಲಾಗಿದೆ.

- ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ 11 ರಂದು 2022-23ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
- ಕರ್ನಾಟಕದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದು ಇದೇ ತಿಂಗಳ 28ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ.
- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನ ಮತ್ತು ಇತರ ಸೂಕ್ತ ಪ್ರದೇಶಗಳಲ್ಲಿ ಚೀತಾ ಪರಿಚಯದ ಮೇಲ್ವಿಚಾರಣೆಗಾಗಿ 9-ಸದಸ್ಯ ಕಾರ್ಯಪಡೆಯನ್ನು ರಚಿಸಿದೆ.
- ಜ್ಞಾನವಾಪಿ ಪ್ರಕರಣಕ್ಕೆ ಮಹತ್ವದ ದಿನ; ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು ನ್ಯಾಯಾಲಯ ಇಂದಿನ ನಿರ್ಧಾರವನ್ನು ಆಲಿಸಬಹುದು.
- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ-NHRC ಹರಿಯಾಣ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.ಹರಿಯಾಣದ ಫರಿದಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಒಳಚರಂಡಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಹೊಗೆಯಿಂದ ನಾಲ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅವರಿಗೆ ಈ ನೋಟಿಸ್ ನೀಡಲಾಗಿದೆ.
- 8ನೇ ಜಿ20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆಯ ಸಂದರ್ಭದಲ್ಲಿ ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಅವರು ದಕ್ಷಿಣ ಕೊರಿಯಾದ ರಾಷ್ಟ್ರೀಯ ಅಸೆಂಬ್ಲಿಯ ಉಪ ಸ್ಪೀಕರ್ ಅವರನ್ನು ಭೇಟಿ ಮಾಡಿದರು.ರಿಪಬ್ಲಿಕ್ ಆಫ್ ಕೊರಿಯಾದೊಂದಿಗೆ ಭಾರತದ ಒಟ್ಟಾರೆ ಸಂಬಂಧದ ಮಹತ್ವವನ್ನು ಅವರು ಒತ್ತಿ ಹೇಳಿದರು.
- ಹಿರಿಯ ನಟ ಅರುಣ್ ಬಾಲಿ ಮುಂಬೈನಲ್ಲಿ ನಿಧನರಾದರು, ಮೃತರಿಗೆ 79 ನೇ ವಯಸ್ಸಾಗಿತ್ತು.
- ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಕ್ಟೋಬರ್ 6 ರಂದು ಉನ್ನತ ಮಟ್ಟದ ಸಭೆಯಲ್ಲಿ ನವೆಂಬರ್ 15 ರೊಳಗೆ ಹೊಂಡ ಮುಕ್ತ ರಸ್ತೆಗಳಿಗಾಗಿ ರಾಜ್ಯಾದ್ಯಂತದ ಅಭಿಯಾನಕ್ಕಾಗಿ ಆದೇಶಿಸಿದ್ದಾರೆ:_ ಸಿಎಂ ಕಚೇರಿ
_ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋಮಾಡಲು ಕ್ಲಿಕ್ಕಿಸಿ