ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ, ಹಸಿರು ಕ್ರಾಂತಿಯ ಹರಿಹಾರ ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಅವರ ಪ್ರತಿಮೆಗೆ (ಭಾವಚಿತ್ರ) ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು, ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಶ್ರೀ ಗೋವಿಂದ ಎಮ್. ಕಾರಜೋಳ, ಗೃಹ ಸಚಿವ ಶ್ರೀಬಸವರಾಜ ಎಸ್. ಬೊಮ್ಮಾಯಿ, ಮಾಜಿ ಸಚಿವರಾದ ಶ್ರೀಎಚ್. ಆಂಜನೇಯ ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.
