ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪಅವರು, ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 38ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಆರೋಗ್ಯ ಸಚಿವ ಬಿ ಶ್ರೀರಾಮುಲು, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ. ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಂಸದರು ಸಸಿಗಳನ್ನು ನೆಟ್ಟರು.