ಸಂಕ್ಷಿಪ್ತ ಸುದ್ದಿ:
ದಕ್ಷಿಣ ಕನ್ನಡ: ಭಾಜಪರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ ಕಟೀಲ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ಸುದರ್ಶನ ಎಮ್. ಮತ್ತು ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.