ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ದಾವಣಗೆರೆ: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 21ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ 100 ಹಾಸಿಗೆಗಳ ಸಾಮರ್ಥ್ಯದ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಆರೋಗ್ಯ ಸಚಿವರಾದ ಮಾನ್ಯ ಬಿ.ಶ್ರೀರಾಮುಲು ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ, ಸಂಸದರಾದ ಜಿ.ಎಮ್.ಸಿದ್ದೆಶ್ವರ ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ ,ಎಸ್.ವಿ.ರಾಮಚಂದ್ರಪ್ಪ, ಪ್ರೊ.ಲಿಂಗಣ್ಣ ಹಾಗೂ ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
