ರಾಜಕೀಯ – ಕ್ರೀಡೆ – ಹೊಸತು – ಶಿಕ್ಷಣ
- ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈಕ್ವೆಡಾರ್, ಸೊಮಾಲಿಯಾ, ಜರ್ಮನಿ ಮತ್ತು ಸುರಿನಾಮ್‌ನ ರಾಯಭಾರಿಗಳಿಂದ ರುಜುವಾತುಗಳನ್ನು ಸ್ವೀಕರಿಸಿದರು.
- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನವ ದೆಹಲಿಯಲ್ಲಿ ಇಂದು ತಾಂಜೇನಿಯಾದ ರಕ್ಷಣಾ ಸಚಿವರಾದ ಡಾ. ಸ್ಟೆರ್ಗೋಮೇನಾ ಲಾರೆನ್ಸ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
- ನಾಳೆ, ದಿನಾಂಕ 27 ರಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಮೇಳ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ರೈತ ಕಲ್ಯಾಣ ಇಲಾಖೆ ಸಚಿವೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.
- ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
- ಜಮ್ಮು ಮತ್ತು ಕಾಶ್ಮೀರ | ಜಿ ಎಂ ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಅವರು “ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ” ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.
- ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರು ಮೂರು ವರ್ಷಗಳ ನಂತರ ದೆಹಲಿಗೆ ಆಗಮಿಸಿದರು.
- ರಾಜಕೀಯ ಪಕ್ಷಗಳಿಂದ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಉಡುಗೊರೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣವನ್ನು ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದೆ.
- ಟೋಕಿಯೋದಲ್ಲಿ ನಡೆಯುತ್ತಿರುವ BWF ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಷಿಪ್ 2022 ಸ್ಪರ್ಧೆಯಲ್ಲಿ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಸೆಮಿ ಫೈನಲ್ಸ್ ಪ್ರವೇಶಿಸಿದೆ.

- ದೇಶದ ನಾಲ್ಕು ವಲಯಗಳಲ್ಲಿ ಮೊದಲನೇಯ ಖೇಲೋ ಇಂಡಿಯಾ ಮಹಿಳಾ ಜೂಡೋ ಪಂದ್ಯಾವಳಿ ನಾಳೆಯಿಂದ ಗುವಾಹತಿಯ ಸಾಯಿ ಕೇಂದ್ರದಲ್ಲಿ ಪ್ರಾರಂಭವಾಗಲಿದೆ.
- ಪ್ರಧಾನಿ ನರೇಂದ್ರ ಮೋದಿ ನಾಳೆ ಮತ್ತು ನಾಡಿದ್ದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.
- UGC ಯುಜಿಸಿ ಕಾಯಿದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ದೆಹಲಿ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಓರಿಸ್ಸಾ, ಪುದುಚೇರಿ ಹಾಗೂ ಆಂಧ್ರಪ್ರದೇಶದ ಒಟ್ಟು 21 “ಸ್ವಯಂ-ಶೈಲಿಯ, ಮಾನ್ಯತೆ ಪಡೆಯದ ಸಂಸ್ಥೆಗಳ” ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅವುಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ ಮತ್ತು ಯಾವುದೇ ಪದವಿಯನ್ನು ನೀಡಲು ಅಧಿಕಾರ ಹೊಂದಿಲ್ಲ ಎಂದು UGC ಸಾರ್ವಜನಿಕ ನೋಟಿಸನ್ನು ಹೊರಡಿಸಿದೆ.
- ಪಾಕಿಸ್ತಾನದಲ್ಲಿ ಉಂಟಾಗಿರುವ ಭಾರೀ ಪ್ರವಾಹದಿಂದಾಗಿ 937ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 30 ದಶಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
_Follow & Support us on Sharechat