ದಿನಪತ್ರಿಕೆ ವಿತರಿಸುವವರಿಗೆ ಇನ್ನು ಮುಂದೆ 2 ಲಕ್ಷ ರೂಪಾಯಿ ಅಪಘಾತ ಪರಿಹಾರ ಸೌಲಭ್ಯ ಮತ್ತು ಒಂದು ಲಕ್ಷ ರೂಪಾಯಿವರೆಗೆ ವೈದ್ಯಕೀಯ ಸೌಲಭ್ಯ ಸಿಗಲಿದೆ.

ಈ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು, ಅದರಂತೆ ದಿನಪತ್ರಿಕೆ ವಿತರಕರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವ್ಯಾಪ್ತಿಗೆ ಸೇರಿಸಲಾಗಿದೆ.