ಸಂಕ್ಷಿಪ್ತ ಸುದ್ದಿ:
ನವದೆಹಲಿ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ “ಕರ್ನಾಟಕ ಭವನ” ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು.

ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾರ್ಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಹಾಗೂ ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದಗೌಡ, ಪ್ರಲ್ಹಾದ ಜೋಷಿ, ಲೋಕಸಭಾ ಸಂಸದರಾದ ಡಾ. ಉಮೇಶ ಜಾಧವ್, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಸೇರಿದಂತೆ ಹಲವಾರು ರಾಜ್ಯದ ಹಾಗೂ ಕೇಂದ್ರದ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
