ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಅವರ ಆಗಮನದ ಹಿನ್ನೆಲೆ ಜಿಲ್ಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ನಡೆಸಲಾಗಿದೆ.

ತಾಲೂಕಿನ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್ 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಸಾಯಿ ಪ್ರೇಮಾಮೃತಂ ಭವನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಸಮಾಧಿ, ಜನ್ಮ ಸ್ಥಳ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ.
_Follow us on DailyHunt