ಸಧ್ಯದ ಸಂಕ್ಷಿಪ್ತ ಸುದ್ದಿ:
ಬದಾಮಿ: ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಎರಡು ಪ್ರೌಢಶಾಲೆ ಕೊಠಡಿಗಳನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ ಶ್ರೀರಾಮುಲು ಮತ್ತು ಪ್ರತಿಪಕ್ಷದ ನಾಯಕರು ಹಾಗೂ ಶಾಸಕರಾದ ಸಿದ್ಧರಾಮಯ್ಯನವರು ಉದ್ಘಾಟಿಸಿದರು ಮತ್ತು

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಘದಿಂದ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದರು, ಜೊತೆಗೆ ಮಾನ್ಯ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಾಯಕ್ಕ ಮೇಟಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಅಧಿಕಾರಿ ವರ್ಗ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.