ಬಳ್ಳಾರಿ: ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243 ಜೆಡ್ ಎ ಹಾಗೂ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ 1976 ರ ಪ್ರಕರಣ 55 ಮತ್ತು ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ಚುನಾವಣೆ ) ನಿಯಮಗಳು, 1979 ರ ನಿಯಮ 3(1) ರಲ್ಲಿ ಪ್ರದತ್ತವಾಗಿರುವ ಅಧಿಕಾರದ ಮೇರೆಗೆ ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡುಗಳಿಗೆ ಚುನಾವಣಾ ವೇಳಾಪಟ್ಟಿಯನುಸಾರವಾಗಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸದರಿ ಚುನಾವಣಾ ವೇಳಾಪಟ್ಟಿ, ನೀತಿ ಸಂಹಿತೆ ಹಾಗೂ ಚುನಾವಣಾ ಕ್ರಮಗಳು ಮತ್ತು ವಿಶೇಷ ಸೂಚನೆಗಳನ್ನು ಈ ಕೆಳಕಂಡಂತೆ ತಿಳಿಸಲಾಗಿದೆ.


