ಸದ್ಯದ ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಬಿ. ಶ್ರೀರಾಮುಲು ಸೇರಿದಂತೆ ಹಲವಾರು ಗಣ್ಯಮಾನ್ಯರು ಹಾಗೂ ಇಲಾಖಾ ಸಂಬಂಧಿತ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.