ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದರು.



ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ ಬಸವರಾಜ ಎಸ್ ಬೊಮ್ಮಾಯಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.