ಸದ್ಯದ ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಅವರು, ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಹಾಗೂ ಅನೇಕ ಕಾಂಗೈ ನಾಯಕರು-ಪದಾಧಿಕಾರಿಗಳು ಹಾಜರಿದ್ದರು.