ಸಧ್ಯದ ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ ಸಿ ಪಾಟೀಲ್, ಸಂಸದರಾದ ಪಿ ಸಿ ಮೋಹನ್, ಶಾಸಕರಾದ ರಿಜ್ವಾನ್ ಅರ್ಶದ್, ಸಂಘದ ಅಧ್ಯಕ್ಷರಾದ ಡಿ ಕೆ ರಾಮಕೃಷ್ಣ, ಖ್ಯಾತ ನಟ ವಿ.ರವಿಚಂದ್ರನ್, ನಟಿ ತಾರಾ ಅನೂರಾಧ, ಸಾ ರಾ ಗೋವಿಂದು ಹಾಗೂ ಚಲನಚಿತ್ರ ವರ್ಗದವರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.