ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವರಾದ ಬಿ.ಎಸ್. ಬೊಮ್ಮಾಯಿ ಅವರು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ವಾಜುಭಾಯ್ ವಾಲಾ ಅವರನ್ನು ಭೇಟಿ ಮಾಡಿ ಕರ್ನಾಟಕದ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೋವಿಡ್ -19 ಅನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದರು ಮತ್ತು ಮುಖ್ಯವಾಗಿ ಕೋವಿಡ್-19 ಪರೀಕ್ಷೆ ಮತ್ತು ವರದಿ, ಪ್ರಕ್ರಿಯೆ ಮತ್ತು ಚಿಕಿತ್ಸೆ ಈ ನಿಟ್ಟಿನಲ್ಲಿ ಸರ್ಕಾರವು ಮಾಡಿರುವ ವ್ಯವಸ್ಥೆಗಳ ಬಗ್ಗೆಯೂ ಸಹ ಚರ್ಚಿಸಿದರು.