ಬೆಂಗಳೂರು: ಮೆಟ್ರೋ ಹಂತ-02 ರ ಮೆಟ್ರೋ ಮಾರ್ಗ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಶಿವಾಜಿನಗರ ನಿಲ್ದಾಣದವರೆಗೆ 2.8 ಕಿ.ಮೀ ಉದ್ದದ ಮೆಟ್ರೋ ಸುರಂಗ ಮಾರ್ಗಕ್ಕೆ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಶಿವಾಜಿನಗರದಲ್ಲಿ 2ನೇ ಹಂತದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಇದಾಗಿದ್ದು, ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಹಿರಿಯ ಅಧಿಕಾರಿಗಳು, ಮೆಟ್ರೋ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.