ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗಾಗಿ, ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಕೋವಿಡ್-19 ಲಸಿಕೆ ಆಂದೋಲನ’ ಕುರಿತ ಕಾರ್ಯಾಗಾರಕ್ಕೆ ಆರೋಗ್ಯ ಇಲಾಖೆ ಆಯುಕ್ತರಾದ ಡಾ.ಕೆ.ವಿ.ತ್ರಿಲೋಕಚಂದ್ರ ಚಾಲನೆ ನೀಡಿದರು.

ಲಸಿಕಾ ಅಭಿಯಾನದ ನಿರ್ದೇಶಕಿ ಶ್ರೀಮತಿ ಡಾ.ಅರುಂಧತಿ ಚಂದ್ರಶೇಖರ್, ಲಸಿಕಾ ವಿಭಾಗದ ಉಪನಿರ್ದೇಶಕಿ ಶ್ರೀಮತಿ ಡಾ.ರಜನಿ, ಆರೋಗ್ಯ ಇಲಾಖೆ ನಿರ್ದೇಶಕರಾದ ಓಂ ಪ್ರಕಾಶ್ ಪಾಟೀಲ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.