ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕೃಷಿ ವಿಶ್ವವಿದ್ಯಾಲಯದ ಕುವೆಂಪು ಭವನದಲ್ಲಿ, ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರ ನೇತೃತ್ವದಲ್ಲಿ ಬೆಂಗಳೂರು ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಮತ್ತು ವಿವಿಧ ಯೋಜನೆಗಳ ಕುರಿತು ಚರ್ಚಿಸಿ, ಅಧಿಕಾರಿಗಳಿಗೆ ಅವಶ್ಯಕ ಸಲಹೆ ಸೂಚನೆಗಳನ್ನು ಮಾನ್ಯ ಸಚಿವರು ನೀಡಿದರು.

ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಹಿರಿಯ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಹಾಜರಿದ್ದರು.