ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಉದ್ಘಾಟಿಸಿದರು.


ಉಪ ಮುಖ್ಯಮಂತ್ರಿಗಳಾದ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ ಎನ್, ಇಲಾಖೆ ಕಾರ್ಯದರ್ಶಿಗಳಾದ ಎಸ್.ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

“ನಾಡಿನ ಸಮಸ್ತ ಯುವಜನತೆಗೆ ವಿಶ್ವ ಯುವ ಕೌಶಲ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಭಾರತ ವಿಶ್ವದಲ್ಲೇ ಅತ್ಯಂತ ಹೆಚ್ಚು ಯುವಶಕ್ತಿಯ ಸಂಪನ್ಮೂಲವನ್ನು ಹೊಂದಿರುವ ದೇಶ. ನಮ್ಮ ಯುವಜನರ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಮೂಲಕ ದೇಶದ ಪ್ರಗತಿಯಲ್ಲಿ ಅವರ ಪಾಲುದಾರಿಕೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ.”_ ಶ್ರೀ ಬಿ ಎಸ್ ಯಡಿಯೂರಪ್ಪ , ಮಾನ್ಯ ಮುಖ್ಯಮಂತ್ರಿಗಳು.

“ಮಾಸ್ಕ್ ಧರಿಸಿ–ದೈಹಿಕ ಅಂತರ ಕಾಪಾಡಿ–ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ”