ಸಧ್ಯದ ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ರಾಜ್ಯದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಯಾದಗಿರಿ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ, ಜಿ.ಪಂ ಸಿಇಒಗಳು ಮತ್ತು ಆರೋಗ್ಯಾಧಿಕಾರಿಗಳೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
