ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಇಂದು ಸಾಯಂಕಾಲ ಮಾನ್ಯ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಜರುಗಿತು.

ಎರಡೂ ಸದನಗಳಲ್ಲಿ ಸರ್ಕಾರವನ್ನು ಕಟ್ಟಿಹಾಕುವುದೂ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ದೃವನಾರಾಯಣ್, ವಿಪಕ್ಷ ನಾಯಕರಾದ ಎಸ್ ಆರ್ ಪಾಟೀಲ್, ಮಾಜಿ ಸಚಿವರಾದ ಕೆ ಜೆ ಜಾರ್ಜ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.