ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿ ವರ್ಗ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

“ನಾಡಿನ ಎಲ್ಲ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿರುವ ಮಾಧ್ಯಮ, ಸ್ವತಂತ್ರವಾಗಿ, ನ್ಯಾಯನಿಷ್ಠವಾಗಿ ಹಾಗೂ ಮೌಲ್ಯಯುತವಾಗಿ ಕಾರ್ಯನಿರ್ವಹಿಸುತ್ತಿರಲಿ ಎಂದು ಆಶಿಸುತ್ತೇನೆ.”_ ಶ್ರೀ ಬಿ ಎಸ್ ಯಡಿಯೂರಪ್ಪ, ಮಾನ್ಯ ಮುಖ್ಯಮಂತ್ರಿಗಳು.