ಸಂಕ್ಷಿಪ್ತ ಸುದ್ದಿ:
ಬೆಳಗಾವಿ: ಅಕಾಲಿಕವಾಗಿ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್, ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಲ್ಲಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಪಕ್ಷದ ಪ್ರಮುಖರು, ಶಾಸಕರು, ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.
