ಸಂಕ್ಷಿಪ್ತ ಸುದ್ದಿ:
ಬೆಳಗಾವಿ : ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇಂದು ಬೆಳಿಗ್ಗೆ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಭಾರತಾಂಬೆ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ, ರೈತರ ಬೆಳೆ ಸಮೀಕ್ಷೆ ಮತ್ತು ಜಿಲ್ಲಾ ಪಕ್ಷ ಕಾರ್ಯಚಟುವಟಿಕೆಗಳ ಬಗ್ಗೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಗಣ್ಯರು ಹಾಗು ರಾಜಕೀಯ ಮುಖಂಡರುಗಳು ಹಾಜರಿದ್ದರು.